Cabinet Expansion: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 19 ಶಾಸಕರು ಇಂದು ಲೋಕಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮೊದಲಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ. ಬಾಲಕೃಷ್ಣ, ಕೆ.ಎಸ್. ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್. ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಬಿ. ನಾಗೇಂದ್ರ, ಪಿ.ಎಂ. ನರೇಂದ್ರಸ್ವಾಮಿ, ಸಿ. ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್ ಹಾಗೂ ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಿದರು.
ಈ ಬಾರಿಯ ಪ್ರಮಾಣವಚನ ಸಮಾರಂಭದಲ್ಲಿ 19 ಸಚಿವರು ಪಶ್ಚಿಮ ದಿಕ್ಕಿಗೆ ಅಭಿಮುಖವಾಗಿ ನಿಂತು ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮೊದಲ ಹಂತದಲ್ಲಿ ಸಚಿವರಾಗಿದ್ದ 13 ಮಂದಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಇನ್ನೊಂದೆಡೆ, ಈ ಮಹತ್ವದ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹೊಸ ಸಚಿವರಿಗೆ ಯಾವ ಯಾವ ಖಾತೆಗಳು ಸಿಗಲಿವೆ ಎಂಬುದರ ಬಗ್ಗೆ ಈಗ ಕುತೂಹಲ ಹೆಚ್ಚಾಗಿದೆ.