72 ಸಾವಿರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ; 90 ಸಾವಿರ ಅಭ್ಯರ್ಥಿಗಳಿಗೆ ಸರ್ಕಾರದಿಂದಲೇ Free Coaching!

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ಗುಡ್ ನ್ಯೂಸ್ ಸಿಕ್ಕಿದೆ. 2026-27ನೇ ಸಾಲಿನಲ್ಲಿ 72,186 ಸರ್ಕಾರಿ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಈ ಹುದ್ದೆಗಳ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಸರ್ಕಾರವೇ Online Free Coaching ನೀಡಲು ನಿರ್ಧರಿಸಿದೆ.

ಒಟ್ಟು 90 ಸಾವಿರ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆ ಇದಾಗಿದೆ. “ಮುಖ್ಯಮಂತ್ರಿಯವರ ವಿದ್ಯಾರ್ಥಿ ಸಹಾಯ ಹಸ್ತ” ಯೋಜನೆಯ ಮೂಲಕ ಈ ತರಬೇತಿಗೆ ಚಾಲನೆ ನೀಡಲಾಗುತ್ತಿದೆ.

ಸೆಪ್ಟೆಂಬರ್ 10ರಿಂದಲೇ Free Coaching ಆರಂಭವಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ನೋಂದಣಿ ಮಾಡಿಕೊಂಡಿರುವ ಮೊಬೈಲ್ ನಂಬರ್ ಬಳಸಿ ಅಭ್ಯರ್ಥಿಗಳು Online Classes‌ಗೆ ಹಾಜರಾಗಬಹುದು. ಅಂದರೆ, ಮನೆಯಿಂದಲೇ ಪರೀಕ್ಷೆಗೆ ತಯಾರಿ ನಡೆಸಲು ಅವಕಾಶ ಸಿಗಲಿದೆ.

ಒಂದೇ ಅಭ್ಯರ್ಥಿಗೆ 3 ಪರೀಕ್ಷೆಗಳಿಗೆ ಅವಕಾಶ

ಈ ಯೋಜನೆಯ ಮತ್ತೊಂದು ವಿಶೇಷತೆ ಎಂದರೆ, ಒಬ್ಬ ಅಭ್ಯರ್ಥಿ ಗರಿಷ್ಠ 3 ಪರೀಕ್ಷೆಗಳಿಗೆ ನೋಂದಣಿ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ, ಕೆಪಿಎಸ್‌ಸಿ ಮತ್ತು ಕೆಇಎ ನಡೆಸುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. SDA, FDA, ಗ್ರಾಮ ಆಡಳಿತಾಧಿಕಾರಿ (VAO), KPSC, UPSC Prelims ಸೇರಿದಂತೆ ಹಲವು ಪರೀಕ್ಷೆಗಳಿಗೆ ಈ Coaching ಉಪಯೋಗವಾಗಲಿದೆ.

2 ಸಾವಿರ Assistant Professor ಹುದ್ದೆಗಳಿಗೂ ನೇಮಕಾತಿ

ಇದರ ಜೊತೆಗೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯೂ ನಡೆಯುತ್ತಿದೆ. ಸುಮಾರು 2,000 Assistant Professor ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

9 ಕೋಟಿ ವೆಚ್ಚ

ಅಭ್ಯರ್ಥಿಗಳಿಗೆ ಈ Free Coaching ನೀಡಲು ಸರ್ಕಾರ ಸುಮಾರು ₹9 ಕೋಟಿ ವೆಚ್ಚ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ರಾಜ್ಯದ ವಿವಿಧ ನಗರಗಳಲ್ಲಿ ತರಬೇತಿ ಕೇಂದ್ರಗಳ ವ್ಯವಸ್ಥೆ ಮಾಡಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ 2ರಿಂದ 3 ದಿನಗಳಲ್ಲಿ ಟೆಂಡರ್ ಅಂತಿಮಗೊಳಿಸಿ ತರಬೇತಿ ಆರಂಭಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಲಾಗಿದೆ.

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಈ ಯೋಜನೆ ಸಾಕಷ್ಟು ಸಹಾಯವಾಗಬಹುದು. ವಿಶೇಷವಾಗಿ Coachingಗೆ ಹಣ ಖರ್ಚು ಮಾಡಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಲಿದೆ.

Leave a Reply

Your email address will not be published. Required fields are marked *