ಮಂಗಳೂರು: ‘ಟಾಕ್ಸಿಕ್’ (Toxic) ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿರುವ ಬೆನ್ನಲ್ಲೇ ನಟ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಶ್, ಚಿತ್ರದ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯಶ್, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು, ಗರ್ಭಗುಡಿಯ ಸಮೀಪ ಸುಮಾರು 10 ನಿಮಿಷಗಳ ಕಾಲ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ವಿಶೇಷ ಪೂಜೆ ನೆರವೇರಿಸಿ ಮಹಾ ಮಂಗಳಾರತಿಯನ್ನು ಸ್ವೀಕರಿಸಿದರು. ಸಿನಿಮಾ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವುದು ಯಶ್ ಅವರ ರೂಢಿಯಾಗಿದೆ. ಇದೇ ಸಂಪ್ರದಾಯವನ್ನು ಮುಂದುವರಿಸಿರುವ ಅವರು, ಇದೀಗ ‘ಟಾಕ್ಸಿಕ್’ ಚಿತ್ರದ ಯಶಸ್ಸಿಗಾಗಿ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.