ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಹಾಗೂ ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ಇಬ್ಬರೂ ಸಾಕ್ಷಿಗಳಾಗಿದ್ದು, ಕೊಲೆಗೂ ಮುನ್ನ ಆರೋಪಿ ದರ್ಶನ್ ಭಾಗಿಯಾಗಿದ್ದ ಪಾರ್ಟಿಯಲ್ಲಿ ಇಬ್ಬರೂ ಪಾಲ್ಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯ ಹೇಳುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ.
ಅಕ್ಟೋಬರ್ 13ರಂದು ವಿಚಾರಣೆಗೆ ಹಾಜರಾಗಲು ಸೂಚನೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಹೆಚ್ ಕೋರ್ಟ್, ಅಕ್ಟೋಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ಇಬ್ಬರು ನಟರಿಗೆ ಸೂಚಿಸಿದೆ.
ನಟ ಚಿಕ್ಕಣ್ಣ ಅವರಿಗೆ CW-80 ಹಾಗೂ ನಟ ಯಶಸ್ ಸೂರ್ಯ ಅವರಿಗೆ CW-98 ಎಂದು ಸಮನ್ಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂ ಕೋರ್ಟ್ನಲ್ಲೂ ದರ್ಶನ್ಗೆ ಶಾಕ್
ಸ್ಟೋನಿ ಬ್ರೂಕ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆರೋಪ
ಬೆಂಗಳೂರಿನ ಸ್ಟೋನಿ ಬ್ರೂಕ್ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರು ಆರೋಪಿ ದರ್ಶನ್ ಜೊತೆ ಭಾಗಿಯಾಗಿದ್ದರು ಎನ್ನಲಾಗಿದೆ.
ಈ ಪಾರ್ಟಿಗೆ ಸಂಬಂಧಿಸಿದಂತೆ ಇಬ್ಬರು ನಟರಿಂದ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯ ಪಡೆಯಲು ನ್ಯಾಯಾಲಯ ಸಮನ್ಸ್ ನೀಡಿದೆ. ಅಕ್ಟೋಬರ್ 13ರಂದು ಇಬ್ಬರೂ ಕೋರ್ಟ್ಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ.
ಪ್ರಕರಣದಲ್ಲಿ ಕೇಳಿಬರುತ್ತಿರುವ ಆರೋಪಗಳು ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದಲ್ಲಿ ವಿಚಾರಣೆ ಮುಂದುವರಿದಿದ್ದು, ನ್ಯಾಯಾಲಯದ ಮುಂದಿನ ಪ್ರಕ್ರಿಯೆಗಳ ಬಳಿಕ ಮತ್ತಷ್ಟು ಮಾಹಿತಿ ಹೊರಬರಲಿದೆ.
ಇದನ್ನೂ ಓದಿ: BBK 13: ರಾಜಿಯಾದ ಸೌಂದರ್ಯಾ-ಯಶಸ್