ನಟ, ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

ಬೆಂಗಳೂರು: ಖ್ಯಾತ ನಟ ಹಾಗೂ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ, ಕಿರುಕುಳ ಹಾಗೂ ಬೆದರಿಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು ₹3 ಕೋಟಿ 85 ಲಕ್ಷ ಹಣ ಪಡೆದು, ಬಳಿಕ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ‘ಫೀನಿಕ್ಸ್’ ಸಿನಿಮಾ ನಿರ್ಮಾಣದ ಉದ್ದೇಶಕ್ಕಾಗಿ ಆರೋಪಿಗಳು ದೂರುದಾರರಿಂದ ಹಂತ ಹಂತವಾಗಿ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಆದರೆ ಹಣ ವಾಪಸ್ ನೀಡುವಂತೆ ಕೇಳಿದಾಗ ಯಾವುದೇ ಸ್ಪಂದನೆ ನೀಡದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಣ ಕೇಳಲು ಮನೆಗೆ ತೆರಳಿದ್ದ ವೇಳೆ ಕಿರುಕುಳ ನೀಡಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಗಮನಿಸಿ: ದೂರುದಾರರು ಮಾಡಿರುವ ಆರೋಪಗಳ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

Leave a Reply

Your email address will not be published. Required fields are marked *