ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹ-ಮಾಲಕಿ ಕಾವ್ಯಾ ಮಾರನ್ ಅವರ ವಿವಾಹದ ಸುದ್ದಿ ಈಗ ಗಮನ ಸೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸನ್ ಟಿವಿ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್ ಮತ್ತು ಅವರ ಪತ್ನಿ ಕಾವೇರಿ ಮಾರನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದಾರೆ.
ಸಿಎಂ ಡಿಕೆ ಶಿವಕುಮಾರ್‌ಗೆ ಆಹ್ವಾನ ಪತ್ರಿಕೆ
ಅಕ್ಟೋಬರ್ 17ರಂದು ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕಲಾನಿಧಿ ಮಾರನ್ ದಂಪತಿ, ತಮ್ಮ ಮಗಳ ವಿವಾಹಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಾ ಕಲಾನಿಧಿ ಅವರೂ ಜೊತೆಗಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ: SSLC–PUC ವಿದ್ಯಾರ್ಥಿಗಳೇ ಗಮನಿಸಿ: ಈ ವರ್ಷದಿಂದ 2 ಮುಖ್ಯ ಪರೀಕ್ಷೆ ಮಾತ್ರ? ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರ
ಪ್ರಧಾನಿ ಮೋದಿ ಸೇರಿ ಗಣ್ಯರಿಗೆ ಆಹ್ವಾನ
ಅನಿರುದ್ಧ್ ಮತ್ತು ಕಾವ್ಯಾ ಅವರ ವಿವಾಹದ ಹಿನ್ನೆಲೆಯಲ್ಲಿ ಕಲಾನಿಧಿ ಮಾರನ್ ದಂಪತಿ ವಿವಿಧ ಕ್ಷೇತ್ರಗಳ ಗಣ್ಯರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನಿಸುತ್ತಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಲಾಗಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಸಚಿವ ನಾರಾ ಲೋಕೇಶ್ ಅವರಿಗೂ ಆಮಂತ್ರಣ ನೀಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರಿಗೂ ಆಹ್ವಾನ ನೀಡುವ ಬಗ್ಗೆ ಸುದ್ದಿಗಳು ಪ್ರಕಟವಾಗಿವೆ.
ಮದುವೆ ಯಾವಾಗ, ಎಲ್ಲಿ?
ನೀಡಿರುವ ಮಾಹಿತಿಯ ಪ್ರಕಾರ, ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್ ಅವರ ವಿವಾಹ ನವೆಂಬರ್ 11ರಂದು ಗ್ರೀಸ್‌ನಲ್ಲಿ ನಡೆಯಲಿದೆ. ಬಳಿಕ ನವೆಂಬರ್ 21ರಂದು ಚೆನ್ನೈನಲ್ಲಿ ಆರತಕ್ಷತೆ ಆಯೋಜಿಸಲಾಗಿದೆ ಎಂದು ವರದಿಯಾಗಿದೆ. ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.