ಬೆಂಗಳೂರು: ರಾಜ್ಯದ ಪ್ರತಿ ಕುಟುಂಬಕ್ಕೂ ಸರ್ಕಾರಿ ಉದ್ಯೋಗ ದೊರೆಯುವ ನಿಟ್ಟಿನಲ್ಲಿ ಸರ್ಕಾರಿ ನೌಕರರ ಸೇವಾ ನಿವೃತ್ತಿ ವಯಸ್ಸನ್ನು ಈಗಿನ 60 ವರ್ಷದಿಂದ 45 ವರ್ಷಕ್ಕೆ ಇಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿ ಮತ್ತು ಭ್ರಷ್ಟಾಚಾರದ ಕುರಿತು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಸರಿದಾರಿಗೆ ತರುವ ಅಗತ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜೊತೆಗೆ, ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಮೂಲಕ ಹೆಚ್ಚಿನ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬಹುದೇ ಎಂಬ ಚರ್ಚೆಗೆ ಕುಮಾರಸ್ವಾಮಿ ಅವರ ಈ ಅಭಿಪ್ರಾಯ ಕಾರಣವಾಗಿದೆ. ಇದನ್ನೂ ಓದಿ: ಹಸಿ ತೆಂಗಿನಕಾಯಿ ತಿನ್ನುವುದರಿಂದ ಏನಾಗುತ್ತೆ? ಕೊಲೆಸ್ಟ್ರಾಲ್ ಇರುವವರು ಈ ವಿಷಯ ತಿಳಿಯಿರಿ!