ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದೆ.
ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಅಕ್ಟೋಬರ್ 19ರೊಳಗೆ ನಿಗದಿತ ಶುಲ್ಕ ಪಾವತಿಸಬೇಕು. ಬಳಿಕ ಅಕ್ಟೋಬರ್ 23ರೊಳಗೆ ತಮಗೆ ಹಂಚಿಕೆಯಾಗಿರುವ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ಸೀಟು ಹಂಚಿಕೆ ಫಲಿತಾಂಶವನ್ನು ಪರಿಶೀಲಿಸಬಹುದು.
ಪಿಬಿ ಬಿಎಸ್ಸಿ ನರ್ಸಿಂಗ್ ಪ್ರವೇಶಕ್ಕೆ ಆಯ್ಕೆ ದಾಖಲಿಸಲು ಅವಕಾಶ
ಪೋಸ್ಟ್ ಬೇಸಿಕ್ (PB) ಬಿಎಸ್ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ (AHS) ಲ್ಯಾಟರಲ್ ಎಂಟ್ರಿ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ತಮ್ಮ ಇಚ್ಛೆ ಮತ್ತು ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ.
ಅಕ್ಟೋಬರ್ 19ರ ಬೆಳಿಗ್ಗೆ 11 ಗಂಟೆಯವರೆಗೆ ಅಭ್ಯರ್ಥಿಗಳು ಆಯ್ಕೆಗಳನ್ನು ದಾಖಲಿಸಬಹುದು. ಅದೇ ದಿನ ಸಂಜೆ 4 ಗಂಟೆಗೆ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ.
ಅಣಕು ಫಲಿತಾಂಶವನ್ನು ಪರಿಶೀಲಿಸಿದ ಬಳಿಕ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಬದಲಾಯಿಸಲು, ಹೊಸ ಆಯ್ಕೆಗಳನ್ನು ಸೇರಿಸಲು ಅಥವಾ ಈಗಾಗಲೇ ದಾಖಲಿಸಿರುವ ಆಯ್ಕೆಗಳನ್ನು ಅಳಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪ್ರಕ್ರಿಯೆಗೆ ಅಕ್ಟೋಬರ್ 19ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 22ರ ಬೆಳಿಗ್ಗೆ 11 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ನಿಗದಿತ ಸಮಯದ ನಂತರ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೆಚ್. ಪ್ರಸನ್ನ ತಿಳಿಸಿದ್ದಾರೆ.
One thought on “PGCET ಫಲಿತಾಂಶ ಪ್ರಕಟ: ಶುಲ್ಕ ಪಾವತಿಸಲು ಅ.19 ಕೊನೆಯ ದಿನ, ಅ.23ರೊಳಗೆ ಕಾಲೇಜಿಗೆ ವರದಿ!”