Ramayana: ಪಾಕಿಸ್ತಾನದಲ್ಲೂ ನಿತೇಶ್ ತಿವಾರಿ ‘ರಾಮಾಯಣ’ ಕ್ರೇಜ್! ಸಿನಿಮಾ ಬಿಡುಗಡೆಗೆ ಕರಾಚಿಯಲ್ಲಿ ಹಿಂದೂಗಳ ಆಗ್ರಹ

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಸದ್ದು ಮಾಡುತ್ತಿದೆ. ಪಾಕಿಸ್ತಾನದ ಕರಾಚಿಯಲ್ಲಿ ಹಿಂದೂ ಸಮುದಾಯದವರು ಸಿನಿಮಾ ಬಿಡುಗಡೆಗೆ ಆಗ್ರಹಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೋದಲ್ಲಿ ಪಾಕಿಸ್ತಾನದ ಹಿಂದೂಗಳು ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಅವರ ಪೋಸ್ಟರ್‌ಗಳನ್ನು ಹಿಡಿದು ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದಲ್ಲೂ ‘ರಾಮಾಯಣ’ ಸಿನಿಮಾ ಬಿಡುಗಡೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಾಹಿತಿಯ ಪ್ರಕಾರ, ‘ರಾಮಾಯಣ’ ಸಿನಿಮಾ ನವೆಂಬರ್ 5ರಂದು ದೀಪಾವಳಿ ಸಂದರ್ಭದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಾಣುವುದರ ಜೊತೆಗೆ ಆಸ್ಕರ್ ಪ್ರಶಸ್ತಿಯನ್ನೂ ಗೆಲ್ಲಬೇಕು ಎಂಬ ಆಶಯವನ್ನು ಪಾಕಿಸ್ತಾನದ ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *