ಲಾಲ್ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್ಗೂ ಎಂಟ್ರಿ ಫೀಸ್? ತೋಟಗಾರಿಕೆ ಇಲಾಖೆಯಲ್ಲಿ ಚರ್ಚೆ
Share this… Facebook Whatsapp Telegram Pinterest Twitter Linkedinಬೆಂಗಳೂರಿನ ಪ್ರಮುಖ ಉದ್ಯಾನವನವಾಗಿರುವ ಕಬ್ಬನ್ ಪಾರ್ಕ್ಗೆ ಲಾಲ್ಬಾಗ್ ಮಾದರಿಯಲ್ಲಿ ಪ್ರವೇಶ ಶುಲ್ಕ ವಿಧಿಸುವ ಕುರಿತು ತೋಟಗಾರಿಕೆ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಕಬ್ಬನ್ ಪಾರ್ಕ್ಗೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ವಾರಾಂತ್ಯದಲ್ಲಿ ಜನಜಂಗುಳಿ ಮತ್ತಷ್ಟು ಹೆಚ್ಚಾಗುತ್ತಿದೆ. ಸುಮಾರು 300 ಎಕರೆ ವಿಸ್ತೀರ್ಣ ಹೊಂದಿರುವ ಉದ್ಯಾನದ ಸ್ವಚ್ಛತೆ, ಭದ್ರತೆ ಹಾಗೂ ನಿರ್ವಹಣೆಗೆ ತಗಲುವ ವೆಚ್ಚವೂ ಹೆಚ್ಚುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರವೇಶ ಶುಲ್ಕ ನಿಗದಿ ಮಾಡಿದರೆ…